ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ. ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...