Skip to main content

ಜಾತಿರಾಜಕಾರಣ ಯಾಕೆ ಬೇಕು..?

      ಮ್ಮದು ಜ್ಯಾತ್ಯಾತೀತ ದೇಶ.ಹೀಗೆಂದು ಹೇಳಿಕೊಳ್ಳುವವರಿಗೆ ಲೆಕ್ಕವಿಲ್ಲ.ಆದರೂ,ಅನೇಕ ರೀತಿ-ರಿವಾಜು,ಜಾತಿ-ಧರ್ಮಗಳನ್ನು ಹೊಂದಿರುವ ದೇಶದಲ್ಲಿ ಸಾಮರಸ್ಯ ಕಾಣಬೇಕಾದರೆ ಜ್ಯಾತ್ಯಾತೀತತೆಯ ಕಡೆ ಒಲವು ಮೂಡಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ.ಸರಳ ನಡೆ-ನುಡಿ,ತಾತ್ವಿಕ ವಿಚಾರಗಳ ಕುರಿತ ಚರ್ಚೆ,ಸಹೋದರತೆಯನ್ನು ಸಾರುವ ಗುಣಗಳನ್ನು ಬೆಳೆಸಿಕೊಳ್ಳುವ ರೂಢಿ ಮಾಡಿಕೊಳ್ಳಬೇಕಿದೆ.ಜನರ ನಡುವೆ ಒಮ್ಮತದ ನಿರ್ಧಾರ ಕೈಗೊಳ್ಳಲು ಪ್ರಯತ್ನಗಳು ಸಾಗಬೇಕಿವೆ.ದಿನೇ-ದಿನೇ ಹೆಚ್ಚುತ್ತಿರುವ ಜನಸಂಖ್ಯೆಯಲ್ಲಿ ಕೆಲವೊಂದು ಜಾತಿ-ಧರ್ಮಕ್ಕೆ ಸೇರಿದವರ ಸಂಖ್ಯೆ ಜಾಸ್ತಿಯಿರಬಹುದು.ಇದರಿಂದ ಸಾಮಾಜಿಕ ಬದಲಾವಣೆಗಳು ಸಾಧ್ಯ.ಹೀಗಾಗಿ ಸಮತೋಲನ ಕಾಯ್ದುಕೊಳ್ಳುವ ಜವಾಬ್ದಾರಿ ಮತ್ತೆ ಜನರದೇ ಆಗಿರುತ್ತದೆ.ಆದರೆ ಇದೆಲ್ಲಕ್ಕೂ ಸಂವಿಧಾನತ್ಮಕ ರೂಪು-ರೇಷೆಗಳಿರುತ್ತವೆ.ಮತದಾನದ ಮೂಲಕ ಆಯ್ಕೆಯಾಗಿರುವ ವ್ಯಕ್ತಿ ಊರಿನ ಪ್ರತಿನಿಧಿಯಾಗಿರುತ್ತಾನೆ.ರಾಜಕೀಯ ಪಕ್ಷಗಳು ಮೊದಲ ಹಂತದಲ್ಲಿ ಜನರನ್ನು ವಿಭಾಗಿಸಿಬಿಡುತ್ತದೆ.ಇಲ್ಲಿ ನಡೆಯುವ ಎಲ್ಲಾ ಲೆಕ್ಕಾಚಾರಗಳು ಜನರ ಹಿತದೃಷ್ಠಿಯಿಂದ ಎಂಬ ಮುಖವಾಡ ಹೊತ್ತಿರುತ್ತದೆಯಲ್ಲದೆ ಅಸಲಿ ಅಂಶ ಬೇರೆಯದೇ ಆಗಿರುತ್ತದೆ.
         ರಾಜಕೀಯಕ್ಕೂ ಜಾತಿ-ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ.ಆದರೆ ಇಂದು ನಡೆಯುತ್ತಿರುವುದೆಲ್ಲ ಜಾತಿ ರಾಜಕಾರಣವೆ.ಇದರ ಬೇರು ವಿಶಾಲವಾಗಿ ಹರಡಿ ನಿಂತಿದೆ.ಮತದಾರರನ್ನು ವಿಕೇಂದ್ರಿಕರಿಸಲು ಜಾತಿಯೆಂಬ ಅಸ್ತ್ರದ ಉಪಯೋಗ ಅವ್ಯಾಹತವಾಗಿ ನಡೆಯುತ್ತಿದೆ.ಚುನಾವಣೆ ಬಂತೆಂದರೆ ಸ್ಪರ್ಧಿಯನ್ನು ಕಣಕ್ಕಿಳಿಸುವ ಮೊದಲು ಆಯಾಯ ಕ್ಷೇತ್ರದಲ್ಲಿ ಯಾವ ಜಾತಿ ಜನಸಂಖ್ಯೆ ಪ್ರಬಲವಾಗಿದೆ ಎಂಬುವು
ಮುಖ್ಯವಾಗಿಬಿಡುತ್ತದೆ.ಇದರಿಂದಾಗಿ ಸಮರ್ಧ ನಾಯಕನ ಆಯ್ಕೆಯಾಗುವುದೇ ಇಲ್ಲ.ಪವಿತ್ರ ಧರ್ಮಗಳ ಹೆಸರಿನಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವ ರಾಜಕಾರಣಿಗಳು ಅನ್ಯ ಕೋಮಿನ ನಡುವೆ ವಿವಾದಗಳು ಭುಗಿಲೇಳಲು ಕಾರಣವಾಗುತ್ತಿದ್ದಾರೆ.ಇಲ್ಲಿ ಹೆಚ್ಚು ಕಷ್ಟ ಅನುಭವಿಸುವವರು ಕೆಳಸ್ತರದ ಜನ.ಚುನಾವಣೆಯ ವೇಳೆ ಆಮಿಶಗಳನ್ನು ಒಡ್ಡಿ ತಮ್ಮೆಡೆಗೆ ಸೆಳೆದುಕೊಳ್ಳುತ್ತಾರೆ.ತಮ್ಮದೇ ಕೋಮಿನವನೆಂದು ಜನರೂ ಆಯ್ಕೆ ಮಾಡುತ್ತಾರೆ.ಆದರೆ ಚುನಾವಣೆಯ ನಂತರ ಭರವಸೆಗಳೆಲ್ಲ ಹುಸಿಯಾಗಿ ಬಿಡುತ್ತವೆ.
   ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಾಗುತ್ತಿರುವ ಜಾತಿರಾಜಕಾರಣ ಪ್ರಜಾಪ್ರಭುತ್ವಕ್ಕಾಗುತ್ತಿರುವ ದೊಡ್ಡ ಅವಮಾನವೇ ಸರಿ.ಇದನ್ನು ತಡೆಗಟ್ಟಲು ಒಂದು ಮಾನದಂಡದ ಅಗತ್ಯವಿದೆ.ಶಿಕ್ಷಣದ ಗುಣಮಟ್ಟ ಕಡಿಮೆಯಿರುವ ಜಾತಿ ಯಾ ಧರ್ಮದ ಜನಸಂಖ್ಯೆ ಹೆಚ್ಚಾಗಿಯೇ ಇರುತ್ತದೆ.ಹಾಗಾಗಿ ಅಂಧವರಲ್ಲೇ ಒಬ್ಬರನ್ನು ಚುನಾಯಿಸುವ ತಂತ್ರ ನಡೆಯುತ್ತಿದೆ.ಇದರಿಂದ ಆಡಳಿತ ಮತ್ತು ತಾನು ಪಾಲಿಸಬೇಕಾದ ಕರ್ತವ್ಯಗಳ ಬಗ್ಗೆ ಮಾಹಿತಿಯೇ ಇಲ್ಲದವರು ಗದ್ದುಗೆಯೇರುತ್ತಾರೆ.ನಾಡಿನ ಸಮಗ್ರ ಅಭಿವೃದ್ಧಿಗೆ ಒಳ್ಳೆಯ ನಾಯಕರು ಬೇಕೆ ವಿನಃ ಕಳ್ಳ-ಕಾಕರಲ್ಲ.ಸಮಾಜದ ಒಂದು ಕೋಮಿನ ಜನರನ್ನಷ್ಟೇ ಸಂತೋಷಪಡಿಸುವುದರಲ್ಲಿ ಅರ್ಧವಿಲ್ಲ.ಈ ರೀತಿಯ ಸನ್ನಿವೇಶಗಳೇ  ಕೋಮುವಾದಿ ಸಂಘಟನೆಗಳ ಉಗಮಕ್ಕೆ ನಾಂದಿಯಾಗುತ್ತವೆ. ಇಲ್ಲವೇ ಜಾತಿವಾರು ಪ್ರತ್ಯೇಕ ರಾಜ್ಯಗಳ ಬೇಡಿಕೆಗೂ ಕಾರಣವಾಗಬಹುದು.ಜಾತಿಯ ಹೆಸರಿನಲ್ಲಿ ಮುಗ್ಧರ ಬಲಿ ನಡೆಯುತ್ತಲೇ ಇದೆ.ಇದು ಕೊನೆಗಾಣಬೇಕಾದರೆ ಮೊದಲು ಜಾತಿರಾಜಕಾರಣ ನಿಲ್ಲಬೇಕು.ಜ್ಯಾತ್ಯಾತೀತ ಪಕ್ಷಗಳೆಂದು ಸಾರಿದರಷ್ಟೇ ಸಾಲದು,ಕಾರ್ಯಗತಕ್ಕೆ ಬರಬೇಕು.

Comments

Popular posts from this blog

ಮಾದಕ ಅಧ್ವಾನ

ಧೂ ಮಪಾನ, ಮದ್ಯಪಾನದಂತೆ ಮಾದಕ ದ್ರವ್ಯ ಸೇವನೆಯ ಚಟ ಹೊಸ ತಲೆಮಾರಿನ ಯುವಕ/ಯುವತಿಯರಲ್ಲಿ ವಿದೇಶಿ ಮೋಹದಂತೆ ಸದ್ದಿಲ್ಲದೆ ಹರಡುತ್ತಿದೆ. ಷೋಕಿಗಾಗಿ, ದೈಹಿಕ ಮತ್ತು ಮಾನಸಿಕ ನೋವಿನಿಂದ ಕೆಲ ಕ್ಷಣ ದೂರವಾಗಲು ಇದರ ಬಳಕೆಯಾಗುತ್ತಿದೆ. ಇದಕ್ಕೆ ದಾಸರಾಗುವವರಲ್ಲಿ ಹೆಚ್ಚಿನವರು 18 ರಿಂದ 30 ವರ್ಷದೊಳಗಿನವರು. ಜಗತ್ತಿನೆಲ್ಲೆಡೆ ಸುಮಾರು 500 ಬಿಲಿಯನ್ ಮೊತ್ತದ ಮಾದಕ ವಸ್ತುಗಳ ವಹಿವಾಟು ನಡೆಯುತ್ತದೆ. ಪೆಟ್ರೋಲಿಯಂ ಮತ್ತು ಶಸ್ತ್ರಾಸ್ತ್ರ ಉದ್ದಿಮೆಯ ನಂತರದ ಸ್ಥಾನ ದಕ್ಕಿದೆ! ಪ್ರತಿಷ್ಠೆ ಎಂದುಕೊಂಡಿರುವ ಯುವ ಜನಾಂಗದ ಮೊಂಡುತನ, ಸಾವಿನ ಬಾಗಿಲು ತಟ್ಟುವಂತೆಯೂ ಮಾಡಿದೆ. ದೇಶದಲ್ಲಿ ಸುಮಾರು ಒಂದು ಕೋಟಿ ಹೆರಾಯಿನ್ ವ್ಯಸನಿಗಳಿದ್ದಾರೆ. ಕೆಲ ತಿಂಗಳ ಹಿಂದೆ, ಮಂಗಳೂರಿನ ವಿದ್ಯಾರ್ಥಿನಿಯೋರ್ವಳು ಈ ದುಷ್ಚಟಕ್ಕೆ ಬಲಿಯಾದ ಘಟನೆ ನಮ್ಮ ಮುಂದಿದೆ. ನೆರೆಯ ಪಾಕಿಸ್ತಾನದಿಂದ ಇದರ ವ್ಯವಸ್ಥಿತ ಸರಬರಾಜು ನಡೆಯುತ್ತಿದೆ ಎಂಬ ಗುಮಾನಿಯೂ ಇದೆ. ಅದರಲ್ಲೂ ಕರಾವಳಿ ಪ್ರದೇಶ ವಾಮಮಾರ್ಗ ಕರುಣಿಸಿ ಡ್ರಗ್ ಮಾಫಿಯಾಕ್ಕೆ ತೆರೆದುಕೊಂಡಿದೆ. ಹಾಗಿದ್ದರೆ, ಡ್ರಗ್ಸ್ ಅಥವಾ ಮಾದಕ ವಸ್ತುಗಳ ಕುರಿತಾದ ಪಕ್ಷಿ ನೋಟ ಇಲ್ಲಿದೆ. ಮಾನಸಿಕ ಮತ್ತು ದೈಹಿಕ ಬದಲಾವಣೆಗೆ ಕಾರಣವಾಗುವ ವಸ್ತುಗಳಿಗೆ ಮಾದಕ ವಸ್ತು ಎನ್ನಲಾಗುತ್ತದೆ. ಇದು ಘನ, ದ್ರವ ಅಥವಾ ಅನಿಲ ರೂಪದಲ್ಲಿರುತ್ತದೆ. ವ್ಯಕ್ತಿಯ ನರಮಂಡಲದ ಮೇಲೆ ಪ್ರಭಾವ ಬೀರುವ ಮೂರು ಮುಖ್ಯ ಮಾದಕ ವಸ್ತುಗಳ ವಿಧಗಳು: ಡಿಪ...

ಯುವ ಜನತೆ ಮತ್ತು ಸಾಮಾಜಿಕ ತಾಣಗಳು

        ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ.        ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...

ವ್ಯವಸ್ಥೆ ಬದಲಾಗಬೇಕಿದೆ

ಸ ಮಾಜದ ನಾನಾ ಸ್ತರದ ಜನರ ಜೊತೆ ಒಡನಾಟ ಮತ್ತು ಬಾಂಧವ್ಯ ವೃದ್ಧಿಗೆ ಸಹಾಯವಾಗುವ ಆದರ್ಶ ಗುಣಗಳು ಪ್ರಕೃತಿದತ್ತವಾಗಿ ಸಿಗುವ ವಸ್ತುಗಳೇನೂ ಅಲ್ಲ. ಅಥವಾ ಹುಟ್ಟು ಗುಣವಾಗಿಯೂ ಬರುವಂಥದಲ್ಲ. ಈ ದೇಶದಲ್ಲಿ ಆದರ್ಶ ಪ್ರಾಯರಾಗಿ ಬಾಳಿ ಬದುಕಿದವರ ಸಂಖ್ಯೆಯೂ ತುಂಬಾ ದೊಡ್ಡದಿದೆ. ಆದರೆ ಪ್ರಸ್ತುತ, ಸತ್ಪ್ರಜೆಯಾಗಿ ಉಳಿಯುವುದು ಕಷ್ಟವಾಗುತ್ತಿದೆ. ಹದಗೆಟ್ಟ ಪ್ರಜಾಸತಾತ್ಮಕ ವ್ಯವಸ್ಥೆ, ಅರಾಜಕೀಯತೆ ಒಳ್ಳೆಯವರನ್ನೂ ಕತ್ತಲಿಗೆ ತಳ್ಳುತ್ತಿದೆ. ಸುಲಭ, ಸಸೂತ್ರ ಮತ್ತು ಪಾರದರ್ಶಕತೆ ಕಲ್ಪಿಸಲಿರುವ ವ್ಯವಸ್ಥೆಗಳು ವ್ಯಕ್ತಿ-ಅಭಿಪ್ರಾಯ-ಅಭಿರುಚಿಗೆ ಸಿಲುಕಿ ಕ್ಷೀಣವಾಗಿ ಹೋಗಿವೆ. ಒಟ್ಟು ಸಮಾಜವನ್ನು ಸರಿ ದಾರಿಯಲ್ಲಿ ಕೊಂಡೊಯ್ಯಬೇಕಾದವರೇ ಅಡ್ಡದಾರಿ ಹಿಡಿಯುತ್ತಿರುವುದು ದುರಂತ. ನಾವು ಭಾರತೀಯರೆಂದು ಭಾಷಣ ಬಿಗಿಯುವಾಗ ಎದೆ ತಟ್ಟಿ ಹೇಳಿ ಕೊಳ್ಳುತ್ತೇವೆಯಾದರೂ, ನಮ್ಮಲ್ಲಿ ಒಂದು ಕೀಳರಿಮೆ ಇದ್ದೇ ಇದೆ. ಸಮಯ ಪ್ರಜ್ಞೆ, ಕಾಲೆಳೆಯುವುದು, ಯಶಸ್ಸು ಮತ್ತು ಸಾಧನೆಗಳನ್ನು ಪ್ರೊತ್ಸಾಹಿಸದೇ ಇರುವಂತಹ ಅನೇಕ ನಡೆಗಳು ನಮ್ಮೊಳಗೆ ತಾನಾಗಿಯೇ ಬೆಳೆದು ಬಿಟ್ಟಿದೆ. ಈ ಕುರಿತಾದ ಚರ್ಚೆಗಳಲ್ಲೆಲ್ಲಾ ಅಂತಿಮವಾಗಿ ಶಿಕ್ಷಣದ ಕೊರತೆಯಿದೆ ಎಂಬ ನಿರ್ಧಾರಕ್ಕೆ ಬರಲಾಗುತ್ತದೆ. ಆದರೆ ನಾಗರಿಕ ಜೀವನ ನಡೆಸಲು ಶಿಕ್ಷಣದ ಜೊತೆಗೆ ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಜಾರಿಗೆ ಬರಬೇಕಿದೆ. ನಿಜಕ್ಕೂ ಭಾರತದಲ್ಲಿ ಈ ಕುರಿತಾದ ಸಮಗ್ರ ವಿಮರ್ಶೆಯ ಅ...