Skip to main content

Posts

Showing posts from February, 2013

ಅರೊನ್ ಸ್ವಾರ್ಟ್ಜ್:ವಿಮುಕ್ತಿ ತಂದ ತಲೆದಂಡ

      ಸಾ ಧನೆಗೆ ವಯಸ್ಸಿನ ಅಂತರವಿಲ್ಲ.ಹಾಗೆಯೇ ಸಣ್ಣ ಪ್ರಾಯದಲ್ಲೇ ಅಸಾಧರಣ ಸಾಧನೆ ಮಾಡಿ ಬೆರಗು ಹುಟ್ಟಿಸಿದವರು ನಮ್ಮ ನಡುವೆಯಿದ್ದಾರೆ.ಇವರಲ್ಲಿ ಅಲ್ಪಾಯುಷಿಗಳೇ ಜಾಸ್ತಿ. ಅವರ ವಿಧಿಯೇ ಹಾಗಿರುತ್ತದೋ ಏನೋ.ಗಣಕ ತಜ್ಞ,ಸಂಘಟಕ ಅರೊನ್ ಸ್ವಾರ್ಟ್ಜ್ ಕೂಡ ಅಂತರ್ಜಾಲ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಮರ್ಥವಾಗಿ ಹೋರಾಡಿ,ತನ್ನ 26ನೇ ವಯಸ್ಸಿನಲ್ಲಿ ಇಹಲೋಕದ ಬದುಕಿಗೆ ಪೂರ್ಣ ವಿರಾಮವಿಟ್ಟು ನೆನಪಾಗಿ ಉಳಿದು ಬಿಟ್ಟಿದ್ದಾನೆ. 1986 ನವಂಬರ್ 8ರಂದು ಜನಿಸಿಇದ ಸ್ವಾರ್ಟ್ಜ್ ತಂದೆ ರಾಬರ್ಟ್ ಸ್ವಾರ್ಟ್ಜ್ ಮತ್ತು ತಾಯಿ ಸುಸಾನ್.ಬಾಲ್ಯದಿಂದಲೇ ಅಂತರ್ಜಾಲ ಸಂಸ್ಕೃತಿಗೆ ಒಗ್ಗಿ ಹೋಗಿದ್ದ.ಹಾಗಾಗಿ ಅದರಲ್ಲೇ ತನ್ನ ಆಸಕ್ತಿಯನ್ನು ಬೆಳೆಸಿಕೊಂಡ.ತನ್ನ 13ನೇ ವಯಸ್ಸಿನಲ್ಲಿ ಶೈಕ್ಷಣಿಕವಾಗಿ ಉಪಯುಕ್ತ ಜಾಲತಾಣ ನಿರ್ಮಾಣದ ಸ್ಪರ್ಧೆಯಲ್ಲಿ ಬಹುಮಾನ ಗಿಟ್ಟಿಸಿಕೊಂಡ.ಈ ಮೂಲಕ ಮಸ್ಯಾಚುಸೆಟ್ ವಿವಿಯ ಗಣನೀಯ ಸಾಧನೆ ಮಾಡಿದ ವ್ಯಕ್ತಿಗಳ ಭೇಟಿ ಸಾಧ್ಯವಾಯಿತು.ಅಂತರ್ಜಾಲದ ಬಗ್ಗೆ ತನಗಿದ್ದ ತೃಷೆ ನೀಗಿಸಿಕೊಳ್ಳಲು ಅನುವಾಯಿತು.ಅಂತರ್ಜಾಲದಲ್ಲಿನ ಮಾಹಿತಿ ಎಲ್ಲರಿಗೂ ಮುಕ್ತವಾಗಿ ದೊರಕುವಂತಾಗಬೇಕೆಂಬ ದಿಟ್ಟ ನಿರ್ಧಾರದ ಜೊತೆ ಕಾರ್ಯೋನ್ಮುಖನಾದ.ಫಲವಾಗಿ 14ನೇ ವಯಸ್ಸಿನಲ್ಲೇ ಜಾಲತಾಣ ಮತ್ತು ಬ್ಲಾಗ್ ಗಳಲ್ಲಿನ ಹೊಸ ಬದಲಾವಣೆಗಳ ಮಾಹಿತಿಯನ್ನು ಪಡೆಯಲಿರುವ RSS feed(Rich Site Summary)ನ ತಂತ್ರಾಂಶ ನಿರ್ಮಾಣದಲ್ಲಿ ಕೈಜೋಡಿಸಿದ.ಇದೇ ಅಂತರ್ಜಾಲ

ತನು-ಮನ ದಣಿಯದ ಸೇವಕರು

            ‘ ಪ ರೋಪಕಾರವೇ ಪರಮ ಧರ್ಮ’ ಎನ್ನುವವರು ತೀರಾ ವಿರಳ. ಆದರೆ ತಮ್ಮ ಜೀವನವನ್ನು ಸಮಾಜದ ಉನ್ನತಿಗಾಗಿ ಒಂದಲ್ಲ ಒಂದು ರೀತಿಯಲ್ಲಿ ತೊಡಗಿಸಿಕೊಂಡು, ಬದುಕನ್ನು ಸಾರ್ಥಕಗೊಳಿಸಿಕೊಂಡ ನಿಸ್ವಾರ್ಥಿಗಳು ನಮ್ಮ ನಡುವೆ ಇದ್ದಾರೆಂಬುದು ಹೆಮ್ಮೆಯ ವಿಷಯ. ಅಂತಹ ಕೆಲವರ ಪರಿಚಯ ಇಲ್ಲಿದೆ- 1.ಅಖಿಲ್ ಗೊಗೋಯ್ ಅಖಿಲ್ ಗೊಗೋಯ್ ಅಸ್ಸಾಂನ ಜೋರ್ಹಾಟ್ ಜಿಲ್ಲೆಯವರಾದ ಅಖಿಲ್ ಗೊಗೋಯ್ (ಜನನ:1976) ಆಂಗ್ಲ ಸಾಹಿತ್ಯದ ಪದವೀಧರರು. ದೇಶದ ಅತಿ ಸೂಕ್ಷ್ಮ ಈಶಾನ್ಯ ಭಾಗದಲ್ಲಿ ಭ್ರಷ್ಟಾಚಾರದ ವಿರುದ್ಧ ದನಿಯೆತ್ತಿದವರು. ಅಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಮತ್ತು ಹಕ್ಕುಗಳಿಗೆ ಹೋರಾಡಿದರು. ಪ್ರಾರಂಭದಲ್ಲಿ ಯುನೈಟೆಡ್ ರೆವೆಲ್ಯೂಶನರಿ ಮೂಮೆಂಟ್ ಆಫ್ ಅಸ್ಸಾಂನ ಕಾರ್ಯಕರ್ತರಾಗಿ ಸೇರಿಕೊಂಡರು. ನಂತರ ಅಸ್ಸಾಂ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿಯೆಂಬ ಸರ್ಕಾರೇತರ ಸಂಸ್ಥೆಯನ್ನು ಹುಟ್ಟು ಹಾಕಿದರು. ಇದರ ಮೂಲಕ 2009ರಲ್ಲಿ, ಜೀವ ವೈವಿಧ್ಯ ನಾಶವಾಗುತ್ತದೆಂಬ ಕಾರಣಕ್ಕೆ ಅಸ್ಸಾಂನಲ್ಲಿ ಜಲವಿದ್ಯುತ್ ಉತ್ಪಾದನೆಗಾಗಿ ನಿರ್ಮಾಣ ಹಂತದಲ್ಲಿದ್ದ ಅಣೆಕಟ್ಟುಗಳನ್ನು ತಡೆಯುವ ಪ್ರಯತ್ನ ಮಾಡಿದರು. ಮಾಹಿತಿ ಹಕ್ಕು ಕಾಯ್ದೆ ಕಾರ್ಯಕರ್ತರಾಗಿ ಅಸ್ಸಾಂನ ಹಲವು ಹಗರಣಗಳನ್ನು ಬಯಲಿಗೆಳೆದರು. ಇವುಗಳಲ್ಲಿ 1.25 ಕೋಟಿಯ ‘ಸಂಪೂರ್ಣ ಗ್ರಾಮ ರೋಜಗಾರ್ ಯೋಜನೆ’ ಮತ್ತು 60 ಲಕ್ಷದ ‘ಇಂದಿರಾ ಆವಾಸ್ ಯೋಜನೆ’ ಹಗರಣ ಪ್ರಮುಖವು. ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧ